ಕುಷ್ಟಗಿ.
ಬಾಕಿ ಇರುವ ವಿವಿಧ ವ್ಯಾಜ್ಯಗಳ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಸೆ.14 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ನಿಮಿತ್ಯ ಕುಷ್ಟಗಿ ನ್ಯಾಯಾಲಯದಲ್ಲೂ ರಾಜೀ ಸಂದಾನ ನಡೆಸಲಾಗುತ್ತಿದೆ. ಕಕ್ಷಿದಾರರು, ವಕೀಲರು ಈ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ಬಾಕಿ ಇರುವ ಪ್ರಕರಗಳನ್ನು ರಾಜೀ ಸಂದಾನದಲ್ಲಿ ಇತ್ಯಥಪಡಿಸಿಕೊಳ್ಳಬೇಕು ಎಂದು ಕುಷ್ಟಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು ಆಗಿರುವ ಮಂಜುನಾಥ.ಆರ್ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ತಾಲೂಕು ಸಮಿತಿ ಸದಸ್ಯ ಕಾರ್ಯದರ್ಶಿ ಎಮ್.ಎಲ್.ಪೂಜೇರಿ ಕರೆ ನೀಡಿದರು.
ಶನಿವಾರ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿರುವ ನ್ಯಾಯಾಧೀಶರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಸಮಿತಿ ನಿರ್ದೇಶನದಂತೆ ತಾಲೂಕಾ ಕಾನೂನು ಸೇವಾ ಸಮಿತಿಯಿಂದ ಸೆ.೧೪ ರಂದು ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಪಟ್ಟಣದ ನ್ಯಾಯಾಲಯದಲ್ಲೂ ಲೋಕ ಅದಾಲತ್ ಆಯೋಜಿಸಲಾಗಿದೆ. ಹಲವು ವರ್ಷಗಳಿಂದ ಹಲವು ಭೂ ಸ್ವಾಧಿನ, ಅಪಘಾತ ವಿಮೆ ವ್ಯಾಜ್ಯ, ವಿವಾಹ ವಿಚ್ಛೇದನ, ಚೆಕ್ ಬೌನ್, ಹಣಕಾಸು ವ್ಯವಹಾರ, ಬ್ಯಾಂಕ್ ಸಾಲ, ವಿದ್ಯುತ್, ನೀರಿನ ಶುಲ್ಕ ಮುಂತಾದ ರೀತಿಯ ಪ್ರಕರಣಗಳು ಬಾಕಿ ಇರುತ್ತವೆ. ಇಂತಹ ಪ್ರಕರಣಗಳನ್ನು ರಾಜೀ ಸಂದಾನದ ಮೂಲಕ ಇತ್ಯರ್ಥಪಡಿಸಲು ಲೋಕ ಅದಾಲತ್ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನ್ಯಾಯವಾದಿಗಳು ಮತ್ತು ಕಕ್ಷಿದಾರರು ತಮಗೆ ಸಂಬಂಧಿಸಿದ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು. ಇದೊಂದು ಸದಾವಕಾಶವಾಗಿದೆ. ಪ್ರತಿ ಮಾಹೆ ಈ ಲೋಕ ಅದಾಲತ್ ನಡೆಯುತ್ತಿದ್ದು, ಈಗಾಗಲೇ ಹಲವು ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಇತ್ಯಥಪಡಿಸಲಾಗಿದೆ. ಹೀಗಾಗಿ ಸೆ.೧೪ ರಂದು ನಡೆಯುವ ಲೋಕ ಅದಾಲತ್‌ನಲ್ಲಿ ಕೂಡಾ ಭಾಗವಹಿಸಿ ತಮ್ಮ ಬಾಕಿ ಪ್ರಕರಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ನ್ಯಾಯಾಧೀಶರು ಕೊರಿದರು.