ಗಂಗಾವತಿ.
ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮತ್ತು ಸರಕಾರದ ನಾಮ ನಿರ್ದೇಶನ ಮಾಡಿರುವ ಬಗ್ಗೆಯೂ ಮಾಹಿತಿ ಕೊರತೆ ಇದೆ. ಹೀಗಾಗಿ ಅವರು ಎನೆನೋ ಮಾತನಾಡಿದ್ದಾರೆ ಎಂದು ಹಿಂದುಳಿದ ಕಲ್ಯಾಣ ವರ್ಗ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಮುಖಂಡರು ತಮ್ಮನ್ನು ಕಡೆಗಣಿಸುತ್ತಿದ್ದಾರೆ. ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಬಿಜೆಪಿ ಆರ್‌ಎಸ್‌ಎಸ್‌ನವರಿಗೆ ನಾಮ ನಿರ್ದೇಶನ ಮಾಡಿದ್ದಾರೆ ಎಂದು ಇಕ್ಬಾಲ್ ಅನ್ಸಾರಿ ಆಡಿಯೋ ಮೂಲಕ ಇತ್ತೀಚಿಗೆ ನೀಡಿದ್ದ ಹೇಳಿಕೆ ಕುರಿತು ಶುಕ್ರವಾರ ನಗರದ ಡಾ|| ಚಂದ್ರಪ್ಪ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೇಗೆ ಅವರು ಉತ್ತರಿಸಿ, ಪಂಡಿತ ನೇಹರು ಅವರ ಅಭಿವೃದ್ಧಿ ಮತ್ತು ದೇಶದ ಬಗ್ಗೆ ಅವರಿಗೆ ಇರುವ ಕಾಳಜಿಯನ್ನು ಸ್ವತಃ ಮುಖ್ಯಮಂತ್ರಿಗಳು ಇಂದು ಸ್ಮರಿಸಿದ್ದಾರೆ. ಮತ್ತು ಇಂದಿರಾಗಾಂಧಿ ಸೇರಿದಂತೆ ಸೋನಿಯಾಗಾಂಧಿ ರಾಹುಲ್‌ಗಾಂಧಿ ಅವರ ಕೊಡುಗೆ ಈ ದೇಶಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟಿದೆ. ಕಾಂಗ್ರೆಸ್ ಪಕ್ಷ ಎಲ್ಲಾ ಧರ್ಮ, ಜಾತಿಯವರನ್ನು ಸಮಾನವಾಗಿ ನೋಡುತ್ತದೆ. ಶತಮಾನದ ಹಿತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಯಾವುದೇ ವಿಷಯದಲ್ಲೂ ಯಾರಿಗೂ ತಾರತಮ್ಯ ಮಾಡುವುದಿಲ್ಲ. ಇಂತಹ ಕಾಂಗ್ರೆಸ್ ಪಕ್ಷದ ಬಗ್ಗೆ ಸಣ್ಣತನದಿಂದ ಮಾತನಾಡಿರುವ ಇಕ್ಬಾಲ್ ಅನ್ಸಾರಿಗೆ ಮಾಹಿತಿ ಕೊರತೆ ಇದೆ ಎಂದು ನಾನು ಸ್ಪಷ್ಟಪಡಿಸುತ್ತೇನೆ. ನಾನು ಮಾಡಿರುವ ಎಲ್ಲಾ ನಾಮ ನಿರ್ದೇಶನಗಳ ನೇಮಕದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವನ್ನು ಅಳೆದು ತೂಗಿ ನೇಮಕ ಮಾಡಿದೆ. ಗಂಗಾವತಿ ಕ್ಷೇತ್ರದಲ್ಲಿ ಅವರು ಶಿಪಾರಸ್ಸು ಮಾಡಿದವರನ್ನೇ ನೇಮಕ ಮಾಡಿದೆ. ಹೀಗಿದ್ದರೂ ನನ್ನ ಬಗ್ಗೆ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರೆ ಅನ್ಸಾರಿಗೆ ಮಾಹಿತಿ ಕೊರತೆ ಕಾರಣವಾಗಿದೆ. ಅನ್ಸಾರಿ ಹೇಳಿಕೆಯನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತದೆ ಎಂದು ಸಚಿವ ಶಿವರಾಜ ತಂಗಡಗಿ ಅನ್ಸಾರಿ ಆಡಿಯೋ ಕುರಿತು ಖಾರವಾಗಿ ಪ್ರತಿಕ್ರೀಯಿಸಿದರು.
ಸಂಸದ ರಾಜಶೇಖರ ಹಿಟ್ನಾಳ್ ಮಾತನಾಡಿ, ಅನ್ಸಾರಿ ಅವರಿಗೆ ಯಾಕೆ ಅಸಮಾಧಾನವಾಗಿದೆ ಎಂಬುದು ನನಗೆ ಗೊತ್ತಿಲ್ಲ. ಮನೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಾಗಿರಬಹುದು. ಅನ್ಸಾರಿ ಬಗ್ಗೆ ನಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ನಗರ ಬ್ಲಾಕ್ ಅಧ್ಯಕ್ಷ ಶ್ಯಾಮೀದ್ ಮನಿಯಾರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ನಾಗರಾಜ ಬರಗೂರು ಮತ್ತಿತರು ಇದ್ದರು.