ಗಂಗಾವತಿ.
ನಗರಸಭೆಯ ೨೦೨೪-೨೫ನೇ ಸಾಲಿನ ಆಯವ್ಯಯ ಅಂದಾಜು ತಯಾಲಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಬಜೆಟ್ ಮಂಡನೆಗೆ ಸಲಹೆ ಸೂಚನೆಗಳನ್ನು ನೀಡಲು ಡಿ.೨೭ ರಂದು ಬುಧವಾರ ಸಂಜೆ ೪ ಗಂಟೆಗೆ ನಗರಸಭೆ ಆವರಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಈ ಸಭೆಗೆ ನಗರಸಭೆ ಸರ್ವ ಸದಸ್ಯರು, ವಿವಿಧ ಸಂಘ ಸಂಸ್ಥೆ ಪದಾಧಿಕಾರಿಗಳು, ಮಾಜಿ ಸದಸ್ಯರು, ಅನುಭವಿ ಗಣ್ಯರು ಆಗಮಿಸಿ ಸಲಹೆ ಸೂಚನೆ ನೀಡುವಂತೆ ಪೌರಾಯುಕ್ತ ವಿರುಪಾಕ್ಷಮೂರ್ತಿ ಕರೆ ನೀಡಿದ್ದಾರೆ.
ಈ ಕುರಿತು ಅವರು ಮಾಧ್ಯಮಗಳ ಮೂಲಕ ಪ್ರಕಟಣೆ ನೀಡಿದ್ದಾರೆ. ಗಂಗಾವತಿ ನಗರಸಭೆಯ ೨೦೨೪-೨೫ನೇ ಸಾಲಿನ ಆಯವ ವ್ಯಯ ಅಂದಾಜು ತಯಾರಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳು ಅತ್ಯಮೂಲ್ಯವಾಗಿವೆ. ಗಂಗಾವತಿ ನಗರದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸ್ವಚ್ಚತೆ, ಕುಡಿಯುವ ನೀರು ಮತ್ತಿತರ ಕಾರ್ಯಕ್ರಮ ಅನುಷ್ಟಾನಕ್ಕೆ ಈ ಬಜೆಟ್ ಮಂಡನೆಯಾಗುತ್ತಿದೆ. ಹೀಗಾಬಿ ಬಜೆಟ್ ಪೂರ್ವ ಈ ಸಭೆಯನ್ನು ನಡೆಸಲಾಗುತ್ತಿದೆ. ಸಭೆಗೆ ಆಗಮಿಸಿ ಸಲಹೆ ಸೂಚನೆ ನೀಡಬೇಕು ಎಂದು ಕರೆ ನೀಡಿದ್ದಾರೆ.
———————

 

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 9880120038 / 9901195019
error: Content is protected !!