ಫೆ.೨ರಿಂದ ಮೂರು ದಿನಗಳಕಾಲ ಹಂಪಿ ಉತ್ಸವ
ಸಮರ್ಥವಾಣಿ ವಾರ್ತೆ
ವಿಜಯನಗರ,ಡಿ.27: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆ.೨ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.೨ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಧಿಕಾರಿ ದಿವಾಕರ್ ಅವರಿಗೆ ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆ ಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆ ಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಎಲ್ಲ ಜನಪ್ರತಿನಿಧಿ ಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿ ಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.
ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.