ಕೊಪ್ಪಳ.
ಜಿಲ್ಲೆಯ ಕುಷ್ಟಗಿ ಕ್ಷೇತ್ರದ ಶಾಸಕರಾಗಿರುವ ದೊಡ್ಡನಗೌಡ ಪಾಟೀಲ್ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶ ಮಾಡಿದೆ.
ಬುಧವಾರ ಸರಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧಿನ ಕಾರ್ಯದರ್ಶಿ ಟಿ.ವಿ.ಸುನಂದಮ್ಮ ಆದೇಶ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಜೆಪಿಯೇ ಏಕೈಕ ಶಾಸಕರಾಗಿ ಕುಷ್ಟಗಿ ಕ್ಷೇತ್ರದಿಂದ ದೊಡ್ಡನಗೌಡ ಪಾಟೀಲ್ ಅವರು ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಕ್ಷ ಅವರಿಗೆ ಕರ್ನಾಟ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರಕಾರ ವಿಶೇಷ ಗೌರವ ನೀಡಿದ್ದು, ಮುಖ್ಯ ಸಚೇತಕ ಹುದ್ದೆಗೇರಿರುವ ದೊಡ್ಡನಗೌಡ ಪಾಟೀಲ್ ಅವರಿಗೆ ಸರಕಾರ ಸಚಿವ ಸ್ಥಾನಮಾನದ ಗೌರವ ನೀಡಿ, ಅವರು ಪ್ರವಾಸ ಮಾಡುವ ಸಂದರ್ಭದಲ್ಲಿ ಅಲ್ಲಿನ ಜಿಲ್ಲಾಡಳಿತ ವಿಶೇಷ ಮನ್ನಣೆ ನೀಡುವಂತೆ ಆದೇಶಿಸಿದೆ.