ಗಂಗಾವತಿ.
ರಾಷ್ಟ್ರೀಯ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಸೋಮವಾರ ಮಾ.18 ರಂದು ಗಂಗಾವತಿ ನಗರಕ್ಕೆ ಆಗಮಿಸಲಿದ್ದು, ಸಂಜೆ 4.30ಕ್ಕೆ ನಗರದ ಭಾರತೀಯ ವೈದ್ಯಕೀಯ ಭವನದಲ್ಲಿ ನಡೆಯಲಿರುವ ನಮೋ ಭಾರತ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ನಮೋ ಬ್ರೀಗೇಡ್ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾದ ನಂತರ ಹತ್ತು ವರ್ಷದ ಆಡಳಿತ ಅವಧಿಯಲ್ಲಿ ಅವರು ಮಾತನಾಡಿರುವ ಸಾಧನೆ ಕುರಿತು ಚಕ್ರವರ್ತಿ ಸೂಲಿಬೆಲೆ ಅವರು ಸವಿಸ್ತಾರವಾಗಿ ಮಾತನಾಡುತ್ತಾರೆ. ರಾಜ್ಯಾದ್ಯಂತ ಅವರು ನಮೋ ಭಾರತ ಕಾರ್ಯಕ್ರಮ ನಡೆಸಿಕೊಡುತ್ತಿದ್ದು, ಗಂಗಾವತಿಯಲ್ಲಿ ಕೂಡಾ ಸೋಮವಾರ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಸಾರ್ವಜನಿಕರತು, ಚಿಂತಕರು ಆಗಮಿಸಲು ಕೊರಿದ್ದಾರೆ.