ಕೊಪ್ಪಳ.
ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುವಷ್ಟರಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ನಡೆದಿರುವುದು ಬಯಲಾಗಿದೆ.. ಎಸ್ ಟಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಪರಿಶಿಷ್ಟ ಪಂಗಡ ನಿಗಮ ಮತ್ತು ಯುವಜನ ಕ್ರೀಡಾ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಗುರುವಾರ ಸಂಜೆ ಬೆಂಗಳೂರಿನ ವಿಧಾನಸೌಧಕ್ಕೆ ಆಗಮಿಸಿದ್ದ ಸಚಿವ ನಾಗೇಂದ್ರ ಎಸ್ಟಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಿನ್ನೆಯಲ್ಲಿ ತಮ್ಮ ಮೇಲೆ ಬಂದಿರುವ ಆರೋಪದಿಂದ ಸರಕಾರಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ಮುಜುಗರವಾಗಬಾರದು ಎಂದು ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲುಸುವುದಾಗಿ ಸುದ್ದಿಗೋಷ್ಟಿಯಲ್ಲಿ ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ. ನಮ್ಮ ಇಲಾಖೆಯಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಗೂ ನನಗೂ ಯಾವುದೇ ಸಂಬಂಧವಿಲ್ಲ. ಆದರೆ ವಿರೋಧ ಪಕ್ಷದವರ ಆರೋಪದಿಂದಾಗಿ ರಾಜ್ಯದ ಜನರಲ್ಲಿ ಕಾಂಗ್ರೆಸ್ ಸರಕಾರದ ಬಗ್ಗೆ ಅಪನಂಬಿಕೆ ಬರುವಂತೆ ಮಾಡಿ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿರುವುದನ್ನು ತಪ್ಪಿಸಲು ನನ್ನ ಆತ್ಮ ಸಾಕ್ಷಿಯಿಂದಾಗಿ ಯಾರ ಒತ್ತಡವಿಲ್ಲದೇ ರಾಜೀನಾಮೆ ಘೋಷಿಸುತ್ತಿದ್ದೇನೆ ಎಂದರು.
ವಾಲ್ಮಿಕಿ ಪರಿಶಿಷ್ಟ ಪಂಗಡ ನಿಗಮದಲ್ಲಿ ರೂ. 187 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ನಿಗಮದ ಅಧೀಕ್ಷಕ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಸಿದ್ದರಾಮಯ್ಯ ಸರಕಾರಕ್ಕೆ ಕಪ್ಪು ಚುಕ್ಕೆಯಾಗಿತ್ತು. ಪ್ರಕರಣ ತನಿಖೆಯನ್ನು ಎಸ್ ಐಟಿಗೆ ವಹಿಸಿದ್ದರಿಂದ ತನಿಖೆಯಲ್ಲಿ ಈಗಾಗಲೇ ಸಚಿವ ನಾಗೇಂದ್ರ ಆಪ್ತ ಕಾರಟಗಿ ಮೂಲದ ನೆಕ್ಕಂಟಿ ನಾಗರಾಜ್ ಸೇರಿ ಹಲವರನ್ನು ಬಂಧಿಸಲಾಗಿದೆ. ತನಿಖೆ ಸಿಬಿಐ ಗೆ ಹಸ್ತಾಂತರವಾಗುವ ಸುಳಿವನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಜೀನಾಮೆ ನೀಡುವಂತೆ ಸೂಚಿಸಿರುವ ಬೆನ್ನಲ್ಲೆ ನಾಗೇಂದ್ರ ಅವರು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ಬಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ನಾಗೇಂದ್ರ ರಾಜಿನಾಮೆ ನೀಡುವಂತೆ ನಿರಂತರ ನಡೆಸಿದ ಹೊರಾಟಕ್ಕೆ ಮಣಿದ ಕಾಂಗ್ರೆಸ್ ಸರಕಾರದ ಸಚಿವ ಸ್ಥಾನದ ಮೊದಲ ವಿಕೇಟ್ ಪಥನವಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದ ಸಿದ್ದರಾಮಯ್ಯ ಸರಕಾರದ ಒಂದೇ ವರ್ಷದ ಅವಧಿಯಲ್ಲಿ ಹಗರಣ ನಡೆದಿರುವುದು ಭಾರಿ ಚರ್ಚೆಗೆ ಗ್ರಾಸ್ ವಾಗಿದೆ. ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರದ ಹಗರಣ ಎಸ್ ಟಿ ಇಲಾಖೆಯಿಂದಲೇ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ.