ಗಂಗಾವತಿ.
ಶಾಸಕ ಗಾಲಿ ಜನಾರ್ಧನರೆಡ್ಡಿ ವಿರುದ್ಧ ಇಂದು ಗಂಗಾವತಿ ನಗರದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸಿ ಆದರೆ ಅಂತರ ಕಾಯ್ದುಕೊಳ್ಳಿ ಎಂದು ತಮ್ಮ ಬೆಂಬಲಿಗ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚನೆ ನೀಡಿರುವ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಅವರು ಗಂಗಾವತಿಯಲ್ಲಿ ನಾವು ಕೈಗೊಳ್ಳುವ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆದರೆ ನಾವು ಅವರ ಕುಷ್ಟಗಿ ವಿಧಾನಸಭೆ ಕ್ಷೇತ್ರದಲ್ಲಿ ಕೈಯಾಡಿಸಲು ಬರುತ್ತದೆ ಎಂದು ಆಡಿಯೋ ಮೆಸೇಜ್‌ನಲ್ಲಿ ಗುಡಿಗಿರುವುದು ಗಂಗಾವತಿ ಚರ್ಚೆಗೆ ಗ್ರಾಸವಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳಕನಕಾರಿ ಮಾತುಗಳನ್ನು ಆಡಿರುವುದನ್ನು ಖಂಡಿಸಿ ಶಾಸಕ ಗಾಲಿ ಜನಾರ್ಧನರೆಡ್ಡಿ ವಿರುದ್ಧ ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗುರುವಾರ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಬೆಂಬಲಿಗರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಶಾಸಕ ಗಾಲಿ ಜನಾರ್ಧನರೆಡ್ಡಿ ಅವಹೇಳನಕಾರಿಯಾಗಿ ಮಾತನಾಡಿ ಸಂವಿಧಾನ ವಿರುಓಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಪರವಾಗಿ ಜನಾರ್ಧನರೆಡ್ಡಿ ವಿರುದ್ಧ ನಾವು ಗಂಗಾವತಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಈ ವಿಷಯವನ್ನು ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಗಮನಕ್ಕೂ ತಂದಿದ್ದೇವೆ. ಆದರೆ ಅಮರೇಗೌಡ ಬಯ್ಯಾಪುರ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿರುವ ನಗರ ಬ್ಲಾಕ್ ಅಧ್ಯಕ್ಷ ಶ್ಯಾಮೀದ್ ಮನಿಯಾರ್ ಮೂಲಕ ಪ್ರತಿಭಟನೆ ಮಾಡಿಸಲು ಮುಂದಾಗಿದ್ದಾರೆ. ಅಮರೇಗೌಡ ಬಯ್ಯಾಪುರ ಅವರು ನಮ್ಮ ಮೇಲೆ ವಿಶ್ವಾವಿರಿಸಲು ಹಿಂದೆಟು ಹಾಕುತ್ತಿದ್ದಾರೆ. ಬ್ಲಾಕ್ ಅಧ್ಯಕ್ಷ, ಎಸ್‌ಸಿ, ಯುವ ಅಧ್ಯಕ್ಷರು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿ ಜನಾರ್ಧನರೆಡ್ಡಿಗೆ ಬೆಂಬಲಿಸಿದ್ದಾರೆ. ಇಂತಹ ವ್ಯಕ್ತಿಗಳಿಗೆ ಬಯ್ಯಾಪುರ ಅವರು ಸಹಕಾರ ನೀಡುತ್ತಿರುವುದು ನನಗೆ ಬೇಸರ ತರಿಸಿದೆ. ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲೂ ಕೂಡಾ ಅಮರೇಗೌಡ ಬಯ್ಯಾಪುರ ಅವರು ನನಗೆ ಚುನಾವಣೆ ಜವಬ್ದಾರಿ ನೀಡುವಲ್ಲಿ ಕೂಡಾ ಗೊಂದಲ ಸೃಷ್ಟಿಸಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ನಾವು ಯಾವ ರೀತಿ ಕೆಲಸ ಮಾಡಬೇಕೆಂದು ಚರ್ಚಿಸೋಣ. ಆದರೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪರವಾಗಿ ಪ್ರತಿಭಟನೆ ನಡೆಯುತ್ತಿದೆ. ಇದರಲ್ಲಿ ಭಾಗವಹಿಸುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಹೀಗಾಗಿ ಈ ಪ್ರತಿಭಟನೆಯಲ್ಲಿ ನಮ್ಮ ಎಲ್ಲಾ ಬೆಂಬಲಿಗ ಕಾರ್ಯಕರ್ತರು ಕಡ್ಡಾಯವಾಗಿ ಭಾಗವಹಿಸಿ. ಆದರೆ ಬ್ಲಾಕ್ ಸಮಿತಿ ಪದಾಧಿಕಾರಿಗಳಿಂದ ಅಂತರ ಕಾಯ್ದುಕೊಳ್ಳಿ. ಸಿದ್ಧರಾಮಯ್ಯ ಪರವಾಗಿ ಘೋಷಣೆ ಕೂಗಿ ಹೋರಾಟ ನಡೆಸಿ ನಮ್ಮ ವಿರೋಧಿ ಬಣದಿಂದ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸಿ. ನಾವು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈ ಬಲಪಡಿಸಬೇಕು ಎಂದು ಇಕ್ಬಾಲ್ ಅನ್ಸಾರಿ ನೇರವಾಗಿ ಆಡಿಯೋ ಸಂದೇಶದ ಮೂಲಕ ತಮ್ಮ ಬೆಂಬಲಿಗ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.