-
ಕೊಪ್ಪಳ.
ತುಂಗಭದ್ರಾ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ನದಿಗೆ ಬಿಡುವ ಸಂಭವವಿದ್ದು, ನದಿ ಪಾತ್ರದ ಜನರು ಎಚ್ಚರಿಕೆವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳುಸೂಚನೆ ನೀಡಿದ್ದಾರೆ.
ಇಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು DYSP ಸೇರಿದಂತೆ ಗಂಗಾವತಿ, ಕಾರಟಗಿ ಮತ್ತಿತರ ಠಾಣೆಗಳ ಪಿಐಗಳಿಗೆ ಸುಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಬ್ ಡಿವಿಜನಲ್ ಆಫೀಸರ್, ಟಿಬಿ ಡ್ಯಾಂ ರವರ ವೈರ್‌ಲೆಸ್ ಸಂದೇಶದಲ್ಲಿ ಮೊದಲನೇ ಪ್ಲಡ್ ವಾರ್ನಿಂಗ್ ಮಾಹಿತಿಯಲ್ಲಿ ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ಜಲಾಶಯ ಭರ್ತಿಯಾಗುವ ಸಂಭವಗಳಿದ್ದು. ಯಾವುದೇ ಕ್ಷಣದಲ್ಲಿ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಜಲಾಶಯದಿಂದ ನದಿಗೆ ಹೊರಬಿಡಬಹುದಾಗಿದ್ದು, ಈ ಹಿನ್ನೆಲೆಯಲ್ಲಿ ಜಲಾಶಯದ ಕೆಳಭಾಗದ ಗ್ರಾಮಗಳಲ್ಲಿನ ಗ್ರಾಮಸ್ಥರು ಜನ ಮತ್ತು ಜಾನುವಾರುಗಳನ್ನು ನದಿ ಪಾತ್ರದ ಹತ್ತಿರ ಓಡಾಡದಂತೆ ಮುಂಜಾಗ್ರತೆ ವಹಿಸಲು ಎಸ್ ಪಿ ತಿಳಿಸಿದ್ದಾರೆ.
—–