ಗಂಗಾವತಿ.
ಬಳ್ಳಾರಿಯಲ್ಲಿ ಹಲವು ವರ್ಷಗಳ ಹಿಂದೆ ಪಂಚೆ ಎತ್ತಿಕೊಂಡು ಪಾದಯಾತ್ರೆ ಮಾಡಿ ತೊಡೆ ತಟ್ಟಿ ತಮ್ಮ ರಾಜಕೀಯ ಭವಿಷ್ಯ ರೂಪಿಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕುಟುಂಬ ಸಮೇತ ಮೂಡಾ ಹಗರಣದಲ್ಲಿ ಸಿಲುಕಿದ್ದು, ಈಗ ಅವರಿಗೆ ಸಂಕಷ್ಟ ಎದುರಾಗಿದೆ. ಹಗರಣದಲ್ಲಿ ಸಿಲುಕಿದ್ದರಿಂದ ಅವರು ಅಧಿವೇಶನದಲ್ಲಿ ಹತಾಶರಾಗಿರುವುದು ಬಹಿರಂಗವಾಗಿದೆ. ಹಗರಣ ಮೈಮೇಲೆ ಬಂದಿರುವುದರಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸುವ ಧೈರ್ಯ ಮಾಡಬೇಕು ಎಂದು ಶಾಸಕ ಗಾಲಿ ಜನಾರ್ಧನರೆಡ್ಡಿ ಹೇಳಿದರು.
ಸೋಮವಾರ ನಗರದಲ್ಲಿ ಸುದ್ದಿಗಾರೊಂದಿಗೆ ಅವರು ಮಾತನಾಡಿದರು. ೨೦೧೩ರಲ್ಲಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ ನಮ್ಮ ವಿರುದ್ಧ ಮುಗಿ ಬಿದ್ದಿದ್ದರು. ಮತ್ತು ಪಾದಯಾತ್ರೆಯನ್ನೇ ಬಂಡವಾಳ ಮಾಡಿಕೊಂಡು ಅಧಿಕಾರ ಅನುಭವಿಸಿದ್ದರು. ಈಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರು ಮೂಡಾ ಮತ್ತು ಎಸ್‌ಟಿ ನಿಗಮದ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಹಗರಣ ತಮ್ಮ ಮೈ ಮೇಲೆ ಬಂದಿರುವುದು ಅವರಿಗೆ ಮನದಟ್ಟಾಗಿದೆ. ಹೀಗಾಗಿ ಎದುರಿಗೆ ಬಂದವರ ಮೇಲೆ ಸಿಟ್ಟು ಮಾಡುತ್ತಿದ್ದಾರೆ. ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಶ್ನೇಗೆ ಉತ್ತರಿಸದೇ ಹರಿ ಹಾಯ್ದ ಅವರು ಮಾಧ್ಯಮಗಳ ಮುಂದೆಯೂ ಕೋಪಗೊಳ್ಳುತ್ತಿರುವುದು ರಾಜ್ಯದ ಜನತೆ ನೋಡಿದ್ದಾರೆ. ಮೂಡಾ ಹಗರಣದಲ್ಲಿ ತಪ್ಪು ಮಾಡಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯಗೆ ಮನದಟ್ಟಾಗಿದೆ. ಹಗರಣವನ್ನು ಜನತೆಗೆ ತಿಳಿಸಲು ನಾವು ಆ.೩ ರಿಂದ ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಮುಖ್ಯಮಂತ್ರಿಗಳಲ್ಲಿ ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಿ ಹಗರಣದ ತನಿಖೆ ಎದುರಿಸಬೇಕು ಎಂದು ಜನಾರ್ಧನರೆಡ್ಡಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪಂಪಣ್ಣ ನಾಯಕ, ನಾಗರಾಜ ಚಳಗೇರಿ, ದುರಗಪ್ಪ ದಳಪತಿ ಮತ್ತಿತರು ಇದ್ದರು.

 

Leave a Reply

Your email address will not be published. Required fields are marked *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 9880120038 / 9901195019
error: Content is protected !!