ಗಂಗಾವತಿ.
ತುಂಗಭದ್ರಾ ಜಲಾಶಯ ಭರ್ತಿಯಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಗಂಗಾವತಿ ನಗರಕ್ಕೆ ಒಂದು ದಿನ ಬಿಟ್ಟು ಒಂದು ದಿನದಲ್ಲಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ನಗರಸಭೆ ಸದಸ್ಯ ವಾಸುದೇವ ನವಲಿ ಪೌರಾಯುಕ್ತರಿಗೆ ಅಗ್ರಹಿಸಿದ್ದಾರೆ.
ಈ ಕುರಿತು ಅವರು ಸಮರ್ಥವಾಣಿಯೊಂದಿಗೆ ಮಾತನಾಡಿ, ನೀರು ಪೂರೈಕೆ ಕುರಿತು ಪೌರಾಯುಕ್ರರು ತಕ್ಷಣ ಪದ್ಧತಿಯನ್ನು ಬದಲಾಯಿಸುವಂತೆ ಕೊರಿದ್ದಾರೆ. ಕಳೆದ ಒಂದು ವರ್ಷದಿಂದ ತುಂಗಭದ್ರಾ ನದಿಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಗಂಗಾವತಿ ನಗರಕ್ಕೆ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಮಾಡುವ ಪದ್ಧತಿ ಅನುಸರಿಸಲಾಗುತ್ತಿದೆ. ಆದರೆ ಈಗ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಗಂಗಾವತಿ ನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ಯಾವುದೇ ರೀತಿಯ ಕೊರತೆಯಾಗುವುದಿಲ್ಲ. ಗಂಗಾವತಿ ನಗರಕ್ಕೆ ಈ ಹಿಂದೆ ಇದ್ದ ಪದ್ಧತಿಯಂತೆ ಒಂದು ದಿನ ಬಿಟ್ಟು ಒಂದು ದಿನ ನೀರು ಪೂರೈಕೆ ಮಾಡಲು ಮುಂದಾಗಬೇಕು. ನಾಳೆಯಿಂದ ಶ್ರಾವಣ ಮಾಸ ಪ್ರಾರಂಭವಾಗಲಿದ್ದು, ಮುಂದಿನ ನಾಲ್ಕೈ ತಿಂಗಳು ಹಬ್ಬ, ಜಾತ್ರೆ ಮತ್ತಿತರ ಕಾರ್ಯಕ್ರಮಗಳು ಜೋರಾಗಿರುತ್ತವೆ. ಈಗ ಅನುಸರಿಸುತ್ತಿರುವ ಮೂರು ದಿನಕ್ಕೊಮೆಯ ಪದ್ಧತಿಯಿಂದ ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗುತ್ತದೆ. ಹೀಗಾಗಿ ಈಗ ಇರುವ ಪದ್ಧತಿಯನ್ನು ಬದಲಾಯಿಸಿ ದಿನ ಬಿಟ್ಟು ದಿನ ನೀರು ಪೂರೈಕೆ ಮಾಡಿ, ನಗರದ ನಾಗರೀಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ವಾಸುದೇವ ನವಲಿ ಅಗ್ರಹಿಸಿದ್ದಾರೆ.